ಇಂಫಾಲ್, ಫೆ.09(DaijiworldNews/TA): ಮಣಿಪುರ ರಾಜ್ಯದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಇಂದು (ಭಾನುವಾರ) ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜಭವನನಲ್ಲಿ ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲ ಅವರಿಗೆ ಸಲ್ಲಿಸಿದ್ದಾರೆ.

ಇತ್ತೀಚೆಗೆ, ಮಣಿಪುರ ರಾಜಧಾನಿ ಇಂಫಾಲ್ ನಲ್ಲಿ ರಾಜೀನಾಮೆ ಸಲ್ಲಿಸುವುದಾಗಿ ಸಿಎಂ ಬಿರೇನ್ ಸಿಂಗ್ ತಿಳಿಸಿದ್ದರು. ಎರಡು ವರ್ಷಗಳಿಂದ ಮಣಿಪುರ ಜನಾಂಗೀಯ ಕಲಹ ಮತ್ತು ಹಿಂಸಾಚಾರದಿಂದ ಸಂಕಷ್ಟದಲ್ಲಿದೆ. ಈ ನಡುವೆ, ಅವರು ಈ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲರಾಗಿದ್ದಕ್ಕಾಗಿ ರಾಜೀನಾಮೆ ಸಲ್ಲಿಸಿರುವುದೋ ಎಂಬ ಪ್ರಶ್ನೆ ಮೂಡಿದರೂ, ಇದಕ್ಕೆ ಸಂಬಂಧಿಸಿದ ಸ್ಪಷ್ಟನೆ ಇಲ್ಲಿದೆ. ಬಿಜೆಪಿ ನೇತೃತ್ವದ ಮೈತ್ರಿಕೂಟದ ಸರ್ಕಾರವು ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ.
ಬಿರೇನ್ ಸಿಂಗ್ ಅವರು ರಾಜೀನಾಮೆ ಪತ್ರದಲ್ಲಿ, “ಇಷ್ಟರವರೆಗೆ ಮಣಿಪುರ ಜನರ ಸೇವೆ ಮಾಡಲು ನನಗೆ ಅವಕಾಶ ಸಿಕ್ಕಿದ್ದು ನನಗೊಂದು ಗೌರವವಾಗಿದೆ. ಮಣಿಪುರದ ಪ್ರತಿಯೊಬ್ಬ ವ್ಯಕ್ತಿಯ ಸುರಕ್ಷತೆ ಮತ್ತು ರಾಜ್ಯದ ಅಭಿವೃದ್ದಿಗೆ ನಾನು ಹಲವು ಯೋಜನೆಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಿದಕ್ಕೆ ಧನ್ಯವಾದ ಹೇಳುತ್ತೇನೆ. ಈ ಬೆಂಬಲವನ್ನು ಹೀಗೇ ಮುಂದುವರಿಸಬೇಕೆಂದು ಕೇಂದ್ರ ಸರ್ಕಾರವನ್ನು ಕೋರುತ್ತೇನೆ,” ಎಂದು ಅವರು ತಿಳಿಸಿದ್ದಾರೆ. ಮಣಿಪುರ ರಾಜ್ಯದ ಪ್ರಸ್ತುತ ಪರಿಸ್ಥಿತಿ ಮತ್ತು ರಾಜೀನಾಮೆಗೆ ಸಂಬಂಧಿಸಿದ ವಿವರಗಳು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.