ನವದೆಹಲಿ, ಫೆ.10 (DaijiworldNews/AK): ಮಹಾ ಕುಂಭಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ ಮಾಡಿದ್ದಾರೆ. ಎಷ್ಟು ಪಾಪ ಕಳೀತು ಅಂತ ಖರ್ಗೆ ವರದಿ ಪಡೀಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್ ನಿನ್ನೆ ಮಹಾ ಕುಂಭಮೇಳಕ್ಕೆ ತೆರಳಿ ಪುಣ್ಯಸ್ನಾನ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿ, ಅವರವರ ವೈಯಕ್ತಿಕ ಭಕ್ತಿಯ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಎಷ್ಟು ಪಾಪ ಕಳೆದು ಹೋಯಿತು ಎಂದು ಮಲ್ಲಿಕಾರ್ಜುನ ಖರ್ಗೆ ವರದಿ ಪಡೆಯಬೇಕು. ಹಿಂದೂಗಳೇ ವೋಟ್ ಹಾಕೋದು, ಕಡೆಗೆ ಮುಸ್ಲಿಮರಿಂದ ಗೆದ್ದೆವು ಅಂತ ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಮಲ್ಲಿಕಾರ್ಜುನ ಖರ್ಗೆ ಅವರು, ಗಂಗೆಯಲ್ಲಿ ಮುಳುಗೋದ್ರಿಂದ ಬಡತನ ಹೋಗಲ್ಲಎಂದು ಹೇಳಿದ್ದರು.