ನವದೆಹಲಿ, ಫೆ.10 (DaijiworldNews/AA): ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಮಾಡಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ನಾಲ್ವರನ್ನು ಫೆ. 20ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತಿರುಪತಿಯ ಕೋರ್ಟ್ ವೊಂದು ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಪ್ರಸಾದ ತಯಾರಿಕೆಗೆ ತುಪ್ಪ ಪೂರೈಕೆ ಮಾಡಿದ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್, ಪೊಮಿಲ್ ಜೈನ್, ವೈಷ್ಣವಿ ಡೈರಿಯ ಅಪೂರ್ವ ಚಾವ್ಹಾ ಹಾಗೂ ಎ.ಆರ್ ಡೈರಿಯ ರಾಜು ರಾಜಶೇಖರನ್ ಅವರನ್ನು ಬಂಧಿಸಿದ್ದರು.
ಬಂಧಿತರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಫೆ. 20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತುಪ್ಪ ಪೂರೈಕೆಯಲ್ಲಿ ಪ್ರತಿಯೊಂದು ನಿಯಮವನ್ನು ಉಲ್ಲಂಘಿಸಿದ್ದನ್ನು ಸುಪ್ರೀಂ ಕೊರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡವು ಪತ್ತೆ ಮಾಡಿತ್ತು. ಈ ಹಿನ್ನೆಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.