ಮಧ್ಯಪ್ರದೇಶ, ಫೆ.11 (DaijiworldNews/AA): ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ 144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಹಿಂದಿರುಗುವಾಗ ಅಪಘಾತವಾಗಿ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದೆ.

ಸಿಹೋರಾದ ರಾಷ್ಟ್ರೀಯ ಹೆದ್ದಾರಿ-30 ರಲ್ಲಿ ಮೊಹ್ಲಾ ಬರ್ಗಿ ಬಳಿ ಟೆಂಪೋ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೃತಪಟ್ಟವರು ಆಂಧ್ರಪ್ರದೇಶಕ್ಕೆ ಸೇರಿದವರು. ಇನ್ನು ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.
ತ್ರಿವೇಣಿ ಸಂಗಮದಲ್ಲಿ ಮಹಾಕುಂಭದಲ್ಲಿ ಪುಣ್ಯ ಸ್ನಾನ ಮಾಡಿ ಭಕ್ತರು ಹಿಂತಿರುಗುತ್ತಿದ್ದರು. ಅಪಘಾತದ ಬಳಿಕ ಜಬಲ್ಪುರದ ಕಲೆಕ್ಟರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.