ಬೆಂಗಳೂರು,ಫೆ.12 (DaijiworldNews/AK): ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರು ಸಹಿ ಹಾಕಿದ್ದಾರೆ ಈ ಮೂಲಕ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಹಲವು ಸಲಹೆಗಳನ್ನು ನೀಡಿ ಅನುಮೋದಿಸಲಾಗಿದೆ. ಸಲಹೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಮೈಕ್ರೋ ಫೈನಾನ್ಸ್ ಗೆ ಸಂಬಂಧಿಸಿದ ಸುಗ್ರೀವಾಜ್ಣೆಯನ್ನು ಸರ್ಕಾರ ರಾಜಭವನಕ್ಕೆ ಕಳುಹಿಸಿತ್ತು

ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಬೇಕು ಅಂತಾ ಹೊರಟ ಸರ್ಕಾರ ಸುಗ್ರೀವಾಜ್ಞೆ ಮೊರೆ ಹೋಗಿತ್ತು. ಕಠಿಣ ಕಾನೂನು ರೂಪಿಸಿ ರಾಜ್ಯಪಾಲರಿಗೆ ರವಾನಿಸಿದ್ದರು. ಆದರೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ನಿರಾಕರಸಿದ್ದ ರಾಜ್ಯಪಾಲರು, ಸರ್ಕಾರಕ್ಕೆ ವಾಪಸ್ ಕಳಿಸಿದ್ದರು. ಇದರಲ್ಲಿರುವ ಅಂಶಗಳನ್ನ ನೋಡಿದರೆ ಮುಂದಿನ ದಿನಗಳಲ್ಲಿ ಮಾರಕ ಆಗಲಿದೆ ಅನ್ನೋ ಕಾರಣ ನೀಡಿ ಸರ್ಕಾರ ಸ್ಪಷ್ಟನೆ ಕೇಳಿ ವಾಪಸ್ ಮಾಡಿದ್ದರು.