ಬೆಳಗಾವಿ, ಫೆ.14 (DaijiworldNews/AK): ಇನ್ನೆರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ಮರಳುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಾಧ್ಯಮದಕ್ಕೆ ಪ್ರತಿಕ್ರಿಯೆಸಿದ ಅವರು, ದೇವರ ದಯೆಯಿಂದ ಸಂಪೂರ್ಣ ಗುಣಮುಖನಾಗಿದ್ದು, ವೈದ್ಯರು ಆರು ವಾರ ವಿಶ್ರಾಂತಿ ಪಡೆಯುವಂತೆ ಹೇಳಿದ್ದಾರೆ.ಕಳೆದ ಒಂದು ತಿಂಗಳು ತುಂಬ ಕಷ್ಟಕರವಾಗಿತ್ತು. 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿದವಳಿಗೆ ಏಕಾಏಕಿ ಮನೆಯಲ್ಲಿ ಕುಳಿತುಕೊಳ್ಳುವುದು ಕಷ್ಟ. ಸಾಧ್ಯವಾದಷ್ಟು ಜನರಿಗೆ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದೇನೆ ಎಂದರು.
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಜಮಾ ಆಗಲಿದೆ. ತಾಲ್ಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದೆ ಎಂದರು.
ಮೈಕ್ರೊಫೈನಾನ್ಸ್ ಕಿರುಕುಳ ಆರುತಿಂಗಳ ಹಿಂದೆಯೇ ತಿಳಿದಿತ್ತು.ಹೊರಗಿನ ವ್ಯಕ್ತಿಗಳು ಬಂದು ಜಿಲ್ಲೆಯಲ್ಲಿ ಮೈಕ್ರೊ ಫೈನಾನ್ಸ್ ನಡೆಸುತ್ತಿದ್ದಾರೆ, ಎಚ್ಚರವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಸದ್ಯ ಜಿಲ್ಲೆಯ 20 ಸಾವಿರ ಮಹಿಳೆಯರು ಇದರ ವಿಷ ವರ್ತು ಲದಲ್ಲಿ ಸಿಲುಕಿದ್ದಾರೆ. ಮಹಿಳೆಯರು ಯಾವುದಕ್ಕೂ ಎದೆಗುಂದಬಾರದು ಎಂದು ಹೇಳಿದರು.