ನವದೆಹಲಿ, ಫೆ.14 (DaijiworldNews/AA): ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಇದೇ ಫೆ.18ರಂದು ನಿವೃತ್ತಿಗೊಳ್ಳಲಿದ್ದಾರೆ.

ರಾಜೀವ್ ಕುಮಾರ್ ಅವರ ಅಧಿಕಾರ ಅವಧಿ ಫೆ.18ರಂದು ಕೊನೆಗೊಳ್ಳುವ ಹಿನ್ನೆಲೆ ಮುಂದಿನ ಚುನಾವಣಾ ಆಯುಕ್ತರ ಹೆಸರನ್ನು ಅಂತಿಮಗೊಳಿಸಲು ಉನ್ನತ ಮಟ್ಟದ ಆಯ್ಕೆ ಸಮಿತಿ ಫೆ.17ರಂದು ಸಭೆ ಸೇರುವ ಸಾಧ್ಯತೆಗಳಿವೆ. ಪ್ರಧಾನಿ ನೇತೃತ್ವದ ಆಯ್ಕೆ ಸಮಿತಿಯಲ್ಲಿ ಪಿಎಂ ಮೋದಿ, ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘನ್ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಇರಲಿದ್ದಾರೆ. ಪ್ರಧಾನಿಗಳ ಅಧಿಕೃತ ನಿವಾಸದಲ್ಲೇ ಸಭೆಯ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮೊದಲು ಸರ್ಚಿಂಗ್ ಕಮಿಟಿಯಿಂದ ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರನ್ನು ಸಮಿತಿ ಶಿಫಾರಸು ಮಾಡಲಿದೆ. ಬಳಿಕ ಅಧ್ಯಕ್ಷರು ಶಿಫಾರಸಿನ ಆಧಾರದ ಮೇಲೆ ಮುಂದಿನ ಸಿಇಸಿಯನ್ನು ನೇಮಕ ಮಾಡಲಿದ್ದಾರೆ.