ಬೆಂಗಳೂರು, ಫೆ.16 (DaijiworldNews/AA): ಸಿದ್ದರಾಮಯ್ಯ ನಮ್ಮ ನಾಯಕರು, ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಅವರು ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿಗಳು, ನಮ್ಮ ನಾಯಕರು. ಎಲ್ಲಾ ಚುನಾವಣೆಗಳಿಗೂ ಅವರು ಬೇಕು. ಕಾಂಗ್ರೆಸ್ ಪಕ್ಷ ಎರಡು ಬಾರಿ ಸಿಎಂ ಆಗುವ ಅವಕಾಶ ಕೊಟ್ಟಿದೆ. ದಿನ ಬೆಳಗಾದರೇ ಅವರ ಸುದ್ದಿ ಎತ್ತಿಕೊಂಡು ಅವರ ಹೆಸರು ದುರುಪಯೋಗ ಮಾಡೋದು ಬೇಡ. ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಸಿಎಂ ಸಿದ್ದರಾಮಯ್ಯ ಬೇಕು ಎಂದು ಹೇಳಿದರು.
ಸಿದ್ದರಾಮಯ್ಯನವರು ಎಲ್ಲ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿಗೂ ಬೇಕು, ತಾಲೂಕು ಪಂಚಾಯಿತಿಗೂ ಬೇಕು, ಅಸೆಂಬ್ಲಿಗೂ ಬೇಕು, ಪಾರ್ಲಿಮೆಂಟಿಗೂ ಬೇಕು. ಅವರು ಕಾಂಗ್ರೆಸ್ನ ನಾಯಕ. ಅವರನ್ನು ಕಾಂಗ್ರೆಸ್ ಪಕ್ಷ 2 ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ದಿನಾ ಬೆಳಗ್ಗೆದ್ದು ಅವರ ಹೆಸರು ಹೇಳಿಕೊಂಡು ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಅದರ ಅವಶ್ಯಕತೆನೂ ಇಲ್ಲ. ಅವರು ನಮ್ಮ ಪ್ರಶ್ನಾತೀತ ನಾಯಕ ಎಂದರು.