ಕಲಬುರಗಿ, ಫೆ.17 (DaijiworldNews/AK): ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಮಂತ್ರಿಗಳ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಇಲ್ಲಿಯವರೇ ಆಗಿರುವುದರಿಂದ ಎಲ್ಲವೂ ಅವರಿಗೆ ಮಾತ್ರ ಗೊತ್ತು. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈ ರೀತಿಯ ಚರ್ಚೆಗಳು ನಡೆಯುತ್ತಲೇ ಇವೆ. ರಾಜಕೀಯದಲ್ಲಿ ಇವೆಲ್ಲಾ ಮಾಮೂಲು ಎಂದು ಹೇಳಿದರು.
ಮೈಸೂರಿನ ಉದಯಗಿರಿ ಗಲಾಟೆ ಕುರಿತು ಪ್ರತಿಕ್ರಿಯಿಸಿ, ಈ ಗಲಾಟೆ ಬಿಜೆಪಿ ಮತ್ತು ಆರ್ಎಸ್ಎಸ್ ಕೃಪಾಪೋಷಿತ ಕೃತ್ಯವಾಗಿದೆ. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎನ್ನಲಾಗುತ್ತದೆ. ಬಿಜೆಪಿ ಹಾಗೂ ಆರ್ಎಸ್ಎಸ್ ಶಾಂತಿ ಕದಡಲು ಬಹಳ ಪ್ರಯತ್ನ ಮಾಡುತ್ತಿವೆ ಎಂದರು.