ಪ್ರಯಾಗ್ರಾಜ್, ಫೆ.18(DaijiworldNews/TA): ಪ್ರಯಾಗ್ರಾಜ್ ಮಹಾಕುಂಭದಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಕುಟುಂಬ ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಗೈದು ಪೂಜೆ ಸಲ್ಲಿಸಿದರು.

ಪವಿತ್ರ ಗಂಗೆಯಲ್ಲಿ ತೀರ್ಥಸ್ನಾನ ಮಾಡಿದ ಸಚಿವರು, ಮಂತ್ರ ಪಠಣದೊಂದಿಗೆ ದೇವರಿಗೆ ನಮಸ್ಕರಿಸಿ, ಲೋಕದ ಸುಭಿಕ್ಷೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುಟುಂಬ ಸಮೇತರಾಗಿ ವಿಶಿಷ್ಠ ಭಂಗಿಯ ಭಗವಾನ್ ಹನುಮ ದೇವಾಲಯ ಹಾಗೂ ಅಕ್ಷಯವತ್ಗೆ ತೆರಳಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಚಿವರೊಂದಿಗೆ ಪತ್ನಿ ಜ್ಯೋತಿ ಜೋಶಿ, ಮಕ್ಕಳಾದ ಅರ್ಪಿತಾ ಜೋಶಿ, ಅನನ್ಯಾ ಜೋಶಿ, ಅನುಷಾ ಜೋಶಿ ಹಾಗೂ ಸಹೋದರ ಗೋವಿಂದ ಜೋಶಿ-ಕಮಲಾ ಜೋಶಿ ದಂಪತಿ ಸೇರಿದಂತೆ ಮಕ್ಕಳು, ಮೊಮ್ಮಕ್ಕಳು ಕುಟುಂಬದ ಸದಸ್ಯರೆಲ್ಲರೂ ಪುಣ್ಯಸ್ನಾನ ಗೈದು ಪುಣೀತರಾದರು.