ನವದೆಹಲಿ,ಫೆ.19 (DaijiworldNews/AK): ದೆಹಲಿಯ ಹೊಸ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭದ ಸಿದ್ಧತೆಗಳ ನಡುವೆ, ಗುರುವಾರ ನಡೆಯಲಿರುವ ಕಾರ್ಯಕ್ರಮಕ್ಕೆ ಅರವಿಂದ್ ಕೇಜ್ರಿವಾಲ್ ಮತ್ತು ಅತಿಶಿ ಅವರಿಗೆ ಆಹ್ವಾನ ಕಳುಹಿಸಿರುವುದಾಗಿ ಬಿಜೆಪಿ ತಿಳಿಸಿದೆ.

27 ವರ್ಷಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಆಡಳಿತ ಆರಂಭವಾದ ಹಿನ್ನೆಲೆಯಲ್ಲಿ ನೂತನ ದೆಹಲಿ ಮುಖ್ಯಮಂತ್ರಿಯ ಭವ್ಯ ಪ್ರಮಾಣವಚನ ಸಮಾರಂಭಕ್ಕೆ ವೇದಿಕೆ ಸಜ್ಜಾಗಿದೆ. 70 ಸದಸ್ಯರ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಗಳಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ಮುಖ್ಯಮಂತ್ರಿ ಹುದ್ದೆಗೆ ಅಭ್ಯರ್ಥಿಯನ್ನು ಬಿಜೆಪಿ ಇನ್ನೂ ಘೋಷಿಸಿಲ್ಲ. ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳುವ ಮೊದಲೇ ದೆಹಲಿಯ ಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಕಲ ಸಿದ್ಧತೆಗಳು ನಡೆದಿವೆ.