ಬೆಂಗಳೂರು, ಫೆ.19 (DaijiworldNews/AK):ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಮೈಸೂರು ಲೋಕಾಯುಕ್ತ ಕ್ಲೀಚ್ಚಿಟ್ ನೀಡಿದೆ.

ಈ ಬಗ್ಗೆ ವಿರೋಧ ಪಕ್ಷದ ನಾಯಕ ಅಶೋಕ್, ಲೋಕಾಯುಕ್ತ ಅಧಿಕಾರಿಗಳು ವರದಿ ನಾಳೆ ಕೊಡುತ್ತಿದ್ದು, ಅವರು ಅಧಿಕಾರಿಗಳ ಮೇಲೆ ಗೂಬೆ ಕೂರಿಸುತ್ತಾರೆ. ಸಿಎಂ ಸಿದ್ದರಾಮಯ್ಯನವರ ಕುಟುಂಬದವರು ಮುಗ್ಧರು. ಕ್ಲೀನ್ಚೀಟ್ ಅಲ್ಲ, ನಿರ್ಮಾ ಪೌಡರ್ ಹಾಕಿ ತೊಳೆದಿದ್ದಾರೆ ಎಂದು ಲೋಕಾಯುಕ್ತ ವರದಿಗೆ ವ್ಯಂಗ್ಯವಾಡಿದರು.
ಏನು ಇಲ್ಲ ಅಂದ್ರೆ ದುಬಾರಿ ವಕೀಲರನ್ನ ಏಕೆ ಕರೆ ತಂದ್ರಿ? ಹಳ್ಳಿಯ ವಕೀಲರಿಂದ ಕೇಸ್ ಎದುರಿಸಬಹುದಿತ್ತು ಅಲ್ವಾ ? ಇದು ಮುಚ್ಚುಹಾಕುವ ಹುನ್ನಾರ. ಪೊಲೀಸ್ ಅಧಿಕಾರಿಗೆ ವರ್ಗಾವಣೆ, ಪ್ರಮೋಷನ್ ಬೇಕು. ಅದಕ್ಕೆ ಹೀಗೆ ಮಾಡಿದ್ದಾರೆ. ಸಿಬಿಐ ತನಿಖೆಗೆ ಕೊಟ್ರೆ ಮಾತ್ರ ಸತ್ಯ ಹೊರಗಡೆ ಬರುತ್ತದೆ ಎಂದರು.