ಪಾಟ್ನಾ,ಫೆ.24 (DaijiworldNews/AK): ಪಶುಗಳಿಗೆ ಮೀಸಲಾದ ಮೇವನ್ನು ತಿಂದವರು ರೈತರ ಕಲ್ಯಾಣದ ಬಗ್ಗೆ ಯೋಚಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಯಾದವ್ ವಿರುದ್ಧ ಹರಿಹಾಯ್ದಿದ್ದಾರೆ.

ಬಿಹಾರದ ಭಾಗಲ್ಪುರದಲ್ಲಿ ನಡೆದ ರ್ಯಾಲಿಯಲ್ಲಿ ಅವರು ಮಾತನಾಡಿದ ಅವರು, ಈ ವೇಳೆ, ಮಹಾಕುಂಭ ಮೇಳ ಕುರಿತು ಬಿಜೆಪಿ ವಿರುದ್ಧ ಆರ್ಜೆಡಿ ನಾಯಕರ ಟೀಕೆಗಳನ್ನು ಉಲ್ಲೇಖಿಸಿ, ಜಂಗಲ್ ರಾಜ್ಯದವರು ನಮ್ಮ ಪರಂಪರೆ ಮತ್ತು ನಂಬಿಕೆಯನ್ನು ದ್ವೇಷಿಸುತ್ತಾರೆ. ಯುರೋಪಿನ ಇಡೀ ಜನಸಂಖ್ಯೆಗಿಂತ ಹೆಚ್ಚಿನ ಜನರು ಈ ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಇಂತಹ ಪವಿತ್ರ ಆಚರಣೆಯನ್ನು ಟೀಕಿಸುತ್ತಿದ್ದಾರೆ ಎಂದರು.
ರಾಮ ಮಂದಿರವನ್ನು ವಿರೋಧಿಸುವವರು ಮಹಾ ಕುಂಭದ ಬಗ್ಗೆ ಅಪಪ್ರಚಾರ ಮಾಡಲು ಪ್ರತಿಯೊಂದು ಅವಕಾಶವನ್ನೂ ಬಳಸಿಕೊಳ್ಳುತ್ತಿದ್ದಾರೆ. ಈ ರೀತಿ ಕೆಟ್ಟದಾಗಿ ಮಾತನಾಡುವವರನ್ನು ಬಿಹಾರದ ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ನನಗೆ ವಿಶ್ವಾಸವಿದೆ ಎಂದರು.