ಜೈಪುರ, ಮಾ.03 (DaijiworldNews/AA): ಮಹಾಕುಂಭಮೇಳದಲ್ಲಿ ಜನಪ್ರಿಯತೆ ಗಳಿಸಿದ್ದ 'ಐಐಟಿ ಬಾಬಾ' ಅಲಿಯಾಸ್ ಅಭಯ್ ಸಿಂಗ್ ಅವರನ್ನು ಹೋಟೆಲ್ನಲ್ಲಿ ಗಾಂಜಾ ಸಹಿತ ಬಂಧಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಭಯ್ ಸಿಂಗ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ವಿಡಿಯೊ ಆಧರಿಸಿ ಸ್ಥಳಕ್ಕೆ ಧಾವಿಸಿ ಸಿಂಗ್ನನ್ನು ವಿಚಾರಣೆ ಮಾಡಲಾಯಿತು. ಈ ವಿಚಾರಣೆ ವೇಳೆ ಆತನ ಬಳಿ ಅಲ್ಪ ಪ್ರಮಾಣದ ಗಾಂಜಾ ಪತ್ತೆಯಾಗಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಇನ್ನು ಸಿಂಗ್ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣೆ ಬಳಿಕ ಸಿಂಗ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಹೇಳಿದ್ದಾರೆ.