ಜಾರ್ಖಂಡ್, ಮಾ.05 (DaijiworldNews/AA): ನಕ್ಸಲರು ಐಇಡಿ(ಸುಧಾರಿತ ಸ್ಫೋಟಕ ಸಾಧನ) ಸ್ಫೋಟಗೊಳಿಸಿದ ಪರಿಣಾಮ ಜಾರ್ಖಂಡ್ನ ಬಲಿಬಾ ಪ್ರದೇಶದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ.

ಈ ಘಟನೆಯು ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ನಡೆದಿದ್ದು, ಸ್ಫೋಟದ ಬಳಿಕ ಗಾಯಗೊಂಡ ಸೈನಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ರಾಂಚಿಗೆ ವಿಮಾನದ ಮೂಲಕ ಕರೆದೊಯ್ಯಲಾಯಿತು.
ಮನೋಹರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಾರಂಡಾ ಅರಣ್ಯದ ಬಲಿವಾದಲ್ಲಿ ಸಿಆರ್ಪಿಎಫ್ 197 ಬೆಟಾಲಿಯನ್ ಸಿಬ್ಬಂದಿ ಶೋಧ ಕಾರ್ಯಾಚರಣೆಗೆ ಹೋದಾಗ ಈ ಘಟನೆ ನಡೆದಿದೆ. ನಕ್ಸಲ್ ಚಟುವಟಿಕೆಗಳನ್ನು ಎದುರಿಸಲು ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ತೀವ್ರಗೊಳಿಸುತ್ತಿವೆ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.