ಬೆಂಗಳೂರು, ಮಾ.05 (DaijiworldNews/AA): ಡಿಐಜಿ ವರ್ತಿಕಾ ಕಟಿಯಾರ್ ಅವರ ವರ್ಗಾವಣೆ ಬೆನ್ನಲ್ಲೇ ರಾಜ್ಯ ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಐಜಿಪಿ ಡಿ. ರೂಪಾ ಮೌದ್ಗಿಲ್ ಅವರನ್ನು ಸಹ ಕಡೆಗೆ ವರ್ಗಾವಣೆ ಮಾಡಲಾಗಿದೆ.

ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿದ್ದ ರೂಪಾ ಅವರನ್ನು ಇಂದು ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ಎಂಡಿ ಆಗಿ ವರ್ಗಾವಣೆ ಮಾಡಲಾಗಿದೆ.
ಈಗಾಗಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ ರೂಪಾ ಮೌದ್ಗಿಲ್ ನಡುವಿನ ಗುದ್ದಾಟ ಕೋರ್ಟ್ನಲ್ಲಿದೆ. ಇದರ ನಡುವೆ ಡಿ. ರೂಪಾ ಅವರು ಕೆಳಹಂತದ ಸಿಬ್ಬಂದಿಯನ್ನು ಬಳಸಿಕೊಂಡು ತಮ್ಮ ಕೊಠಡಿಯನ್ನು ಅನಧಿಕೃತವಾಗಿ ಪ್ರವೇಶಿಸಿ, ಕೆಲ ದಾಖಲೆಗಳನ್ನು ಇರಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ಮುಖ್ಯ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರ್ತಿಕಾ ಕಟಿಯಾರ್ ಅವರು ದೂರು ನೀಡಿದ್ದರು.
ಇದರ ಬೆನ್ನಲ್ಲೇ ಮೊನ್ನೆ ಡಿಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ವರ್ತಿಕಾ ಅವರ ವರ್ಗಾವಣೆ ಬೆನ್ನಲ್ಲೇ ಐಜಿಪಿ ಡಿ. ರೂಪಾ ಅವರನ್ನು ಕೂಡ ಎತ್ತಂಗಡಿ ಮಾಡಲಾಗಿದೆ.