ಮುಂಬೈ, ಮಾ.9(DaijiworldNews/TA): ನಿಲ್ದಾಣದಲ್ಲಿ ರೈಲಿನಿಂದ ಇಳಿಯಲು ಪ್ರಯತ್ನಿಸಿದಾಗ ಆಯತಪ್ಪಿ ಬಿದ್ದ ಮಹಿಳೆಯೊಬ್ಬರನ್ನು ರೈಲ್ವೆ ಪೊಲೀಸ್ ರಕ್ಷಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಭಾನುವಾರ ರೈಲ್ವೆ ಸಚಿವಾಲಯ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಮುಂಬೈನ ಬೋರಿವಲಿ ರೈಲು ನಿಲ್ದಾಣದಲ್ಲಿ ಮಹಿಳೆ ರೈಲಿನಿಂದ ಇಳಿಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಆದಾಗ್ಯೂ, ಅವರು ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ಪ್ಲಾಟ್ಫಾರ್ಮ್ನಲ್ಲಿ ನಿಂತಿದ್ದ ರೈಲ್ವೆ ಭದ್ರತಾ ಸಿಬ್ಬಂದಿ, ಆಗ ಬೇಗನೆ ಆಕೆಯ ಕಡೆಗೆ ಧಾವಿಸಿ ಆಕೆಯನ್ನು ಎಳೆದು ರಕ್ಷಿಸಿದ್ದಾರೆ. ಅನೇಕ ಬಳಕೆದಾರರು ಅವರ ಪ್ರಯತ್ನಗಳನ್ನು ಶ್ಲಾಘಿಸಿ ಅವರಿಗೆ ಬಹುಮಾನ ನೀಡಬೇಕೆಂದು ಹೇಳಿದ್ದಾರೆ.
"ದಯವಿಟ್ಟು ಚಲಿಸುವ ರೈಲನ್ನು ಹತ್ತಲು ಅಥವಾ ಇಳಿಯಲು ಪ್ರಯತ್ನಿಸಬೇಡಿ" ಎಂದು ರೈಲ್ವೆ ಪ್ರಯಾಣಿಕರಿಗೆ ಇಲಾಖೆ ಸೂಚನೆ ನೀಡುತ್ತಲೇ ಬಂದಿದೆ. ಆದರೆ ಇದನ್ನು ಕಡೆಗಣಿಸಿ ಜನ ಶಕ್ತಿ ಪ್ರದರ್ಶನ ಮಾಡುತ್ತಲೇ ಬಂದಿರುವುದು ಶೋಚನೀಯ.