ಬೆಂಗಳೂರು, ಮಾ.09 (DaijiworldNews/AA): ರಾಜ್ಯದಲ್ಲಿ ವಿದೇಶಿ ಪ್ರವಾಸಿಗರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ವಿಶೇಷ ಮುತುವರ್ಜಿ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ತುಂಗಭದ್ರಾ ನದಿ ಪಾತ್ರದ ಹೋಂ ಸ್ಟೇ ಬಳಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಮಾತನಾಡಿದ ಅವರು. ಇದೊಂದು ದುರದೃಷ್ಟಕರ ಘಟನೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಉನ್ನತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ. ಅನಧಿಕೃತವಾಗಿ ಹೋಂ ಸ್ಟೆ ನಡೆಸುತ್ತಿದ್ದರೆ, ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.