ಕಲಬುರಗಿ, ಮಾ.15 (DaijiworldNews/AA): ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಜ್ಯದ ಸಚಿವರ ಪಾತ್ರ ಹೇಗೆ ಇರಲು ಸಾಧ್ಯ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪ್ರಶ್ನಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಇಬ್ಬರು ಸಚಿವರು ಭಾಗಿಯಾಗಿದ್ದಾರೆ ಎಂಬುದು ಶುದ್ಧ ಸುಳ್ಳು. ಬಹುಶಃ ಕೇಂದ್ರ ಸಚಿವರು ಭಾಗಿಯಾಗಿರಬಹುದು. ರನ್ಯಾ ಭಾಗಿಯಾಗಿರುವ ಪ್ರಕರಣದಲ್ಲಿ ರಾಜ್ಯದ ಸಚಿವರ ಪಾತ್ರ ಹೇಗೆ ಇರಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ವಿಮಾನ ನಿಲ್ದಾಣಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಇರುತ್ತವೆ. ಹಾಗಾಗಿ, ಬಹುಶಃ ತಪ್ಪು ಅಂದಾಜಿನಿಂದ ಹಾಗೆ ಹೇಳಿರಬಹುದು ಎಂದರು.
ವಿಮಾನ ನಿಲ್ದಾಣಗಳಲ್ಲಿ ಶಿಷ್ಟಾಚಾರದ ಜವಾಬ್ದಾರಿ ಕೇಂದ್ರ ಸರ್ಕಾರದ ಅಡಿ ಬರುತ್ತದೆ. ಹೀಗಾಗಿ ನಮ್ಮ ಸರ್ಕಾರದ ಯಾವುದೇ ಸಚಿವರು ಭಾಗಿಯಾಗಿರುವ ಸಾಧ್ಯತೆಗಳಿಲ್ಲ ಎಂದು ಹೇಳಿದರು.