ಪಾಟ್ನಾ, ಮಾ.18 (DaijiworldNews/AA): 'ಉದ್ಯೋಗಕ್ಕಾಗಿ ಭೂಮಿ ಹಗರಣ'ಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಹಾಗೂ ಅವರಿಗೆ ಮಾ.19ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ನೋಟಿಸ್ ಜಾರಿ ಮಾಡಿದೆ.

ಹಣ ಅವ್ಯವಹಾರ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಲಾಲು ಪ್ರಸಾದ್ ಹಾಗೂ ಅವರ ಕುಟುಂಬದವರ ವಿರುದ್ಧ ಪ್ರಕರಣ ದಾಖಲಾಗಿದೆ. ಲಾಲು ಪ್ರಸಾದ್ ಸೇರಿದಂತೆ ಅವರ ಪತ್ನಿ ರಾಬ್ರಿ ದೇವಿ ಮತ್ತು ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿ ಇಂದು ವಿಚಾರಣೆಗೆ ಕರೆದಿದೆ. ಜೊತೆಗೆ ಲಾಲು ಪ್ರಸಾದ್ ಅವರನ್ನು ಮಾರ್ಚ್ 19ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.
ಕಳೆದ ವರ್ಷ ದೆಹಲಿ ಕೋರ್ಟ್ ಲಾಲು ಪ್ರಸಾದ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿತ್ತು. ಲಾಲು ಪ್ರಸಾದ್ ಪತ್ನಿ ರಾಬ್ರಿ ದೇವಿ ಮತ್ತು ಪುತ್ರಿಯರಾದ ಮೀಸಾ ಭಾರತಿ ಹಾಗೂ ಹೇಮಾ ಯಾದವ್ ಅವರನ್ನು ಆರೋಪಿಗಳೆಂದು ಇಡಿ ತಿಳಿಸಿತ್ತು.