ಬೆಂಗಳೂರು, ಮಾ.26 (DaijiworldNews/AK): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.

ಬಿಬಿಎಂಪಿವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧದ ನಡುವೆ ರಾಜ್ಯ ಸರ್ಕಾರ ಬಿಲ್ ಪಾಸ್ ಮಾಡಿಕೊಂಡಿತ್ತು. ಇದೀಗ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರು ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಾಪಸ್ ಕಳುಹಿಸಿದ್ದಾರೆ. ಇದರಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಬಿಬಿಎಂಪಿ ವಿಭಜನೆ ಮಾಡಿ ಬೆಂಗಳೂರು ನಗರ ವಿಸ್ತೀರ್ಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಜಾರಿಗೆ ಮುಂದಾಗಿತ್ತು. ಬಜೆಟ್ ಅಧಿವೇಶನದಲ್ಲಿ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಈ ಮಸೂದೆ ಅಂಗೀಕಾರವಾಗಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಸದ್ಯ ರಾಜ್ಯಪಾಲರು ಅಂಕಿತ ಹಾಕಲು ನಿರಾಕರಿಸಿ ಬಿಲ್ ವಾಪಸ್ ಕಳುಹಿಸಿದ್ದಾರೆ.