ಬೆಂಗಳೂರು,ಮಾ.29(DaijiworldNews/ AK): 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಿದೆ. ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್ ಬಜೆಟ್ಗೆ ಅನುಮೋದನೆ ನೀಡಿದ್ದು, ಸತತ ಐದನೇ ಬಾರಿಗೆ ಅಧಿಕಾರಿಗಳೇ ಬಜೆಟ್ ಮಂಡನೆ ಮಾಡಿದ್ದಾರೆ.

19,927 ಕೋಟಿ ಬೃಹತ್ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್ ಬಜೆಟ್ ಅನುಮೋದನೆ ನೀಡಿದ್ದು, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಮಕ್ಷಮದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ಬಜೆಟ್ ಮಂಡನೆ ಮಾಡಿದ್ದಾರೆ.
ಬ್ರ್ಯಾಂಡ್ ಬೆಂಗಳೂರಿಗೆ ಬಿಬಿಎಂಪಿ ಬಜೆಟ್ನಲ್ಲಿ ಅತಿ ಹೆಚ್ಚಿನ ಮಹತ್ವ ನೀಡಲಾಗಿದೆ. ಬೆಂಗಳೂರು ಪರಿಕಲ್ಪನೆ ಅಡಿಯಲ್ಲಿ ಟ್ರಾಫಿಕ್ ಮುಕ್ತ, ಗ್ರೀನ್ ಸಿಟಿ, ಟೆಕ್, ಶಿಕ್ಷಣ, ಆರೋಗ್ಯ, ರೋಮಾಂಚಕ ಬೆಂಗಳೂರು, ನೀರಿನ ಭದ್ರತೆಗೆ ಅತಿ ಹೆಚ್ಚಿನ ಒತ್ತು ನೀಡಲಾಗಿದೆ. ಬ್ರ್ಯಾಂಡ್ ಬೆಂಗಳೂರಿಗೆ 1,790 ಕೋಟಿ ವೆಚ್ಚ ಮಾಡಲು ನಿರ್ಧಾರ ಮಾಡಲಾಗಿದೆ.