ಬೆಂಗಳೂರು, ಏ.09 (DaijiworldNews/AK): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ಗೆ ಇಡಿ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸಂಬಂಧ ಇಡಿ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಆದೇಶ ಕಾಯ್ದಿರಿಸಿದೆ.

ಇಡಿ ಪರ ವಕೀಲ ಮಧುಕರ್ ದೇಶಪಾಂಡೆ ಹಾಗೂ ಲೋಕಾಯುಕ್ತ ಪೊಲೀಸರ ಪರ ವಕೀಲ ವೆಂಕಟೇಶ್ ಅರಬಟ್ಟಿ ಅವರ ವಾದ ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಏಪ್ರಿಲ್ 15ಕ್ಕೆ ಆದೇಶ ಕಾಯ್ದಿರಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ತೀರ್ಪು ಏನಾಗಲಿದೆಯೋ ಯಕ್ಷ ಪ್ರಶ್ನೆಯಾಗಿ ಉಳಿದಿದೆ.
ಇಡಿ ಮಧ್ಯಂತರ ಅರ್ಜಿಗೆ ಲೋಕಾಯುಕ್ತ ಪೊಲೀಸರ ಪರ ವಕೀಲ ವೆಂಕಟೇಶ್ ಅರಬಟ್ಡಿ ಆಕ್ಷೇಪಿಸಿದ್ದು. ಇಡಿ ಅರ್ಜಿಗೆ ಕಾನೂನಿನಲ್ಲಿ ಅವಕಾಶವಿಲ್ಲ. ಇಡಿ ಅರ್ಜಿಯಲ್ಲಿ ತನಿಖೆ ಬಗ್ಗೆಯೂ ಸ್ಪಷ್ಟತೆಯಿಲ್ಲ. ಲೋಕಾಯುಕ್ತ ಪೊಲೀಸರಿಗೆ ಇಡಿ ಒಂದು ಪತ್ರ, 27 ದಾಖಲೆ ನೀಡಿತ್ತು. ಈ ದಾಖಲೆಗಳನ್ನು ಪರಿಗಣಿಸಿ ಲೋಕಾಯುಕ್ತ ತನಿಖಾಧಿಕಾರಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ವಾದ ಮಂಡಿಸಿದರು.