ಬೆಂಗಳೂರು,ಜೂ17(DaijiworldNews/AZM): ಮುಷ್ಕರವನ್ನು ನಿಲ್ಲಿಸಿ, ಕರ್ತವ್ಯಕ್ಕೆ ಹಾಜರಾಗಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮುಷ್ಕರ ನಿರತ ವೈದ್ಯರಿಗೆ ಮನವಿ ಮಾಡಿಕೊಂಡಿದ್ದಾರೆ.
ವೈದ್ಯರ ಮೇಲಿನ ಹಲ್ಲೆ ಸಮರ್ಥನೀಯ ಅಲ್ಲ, ಆದರೆ ವೈದ್ಯರ ಮುಷ್ಕರದಿಂದ ಸಹಸ್ರಾರು ರೋಗಿಗಳಿಗೆ ತೊಂದರೆ ಆಗ್ತಿದೆ. ಹೀಗಾಗಿ ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಸಿಎಂ ಟ್ವೀಟ್ ಮೂಲಕ ಸೂಚನೆ ನೀಡಿದ್ದಾರೆ.
ವೈದ್ಯರು ಕೂಡ ಶಾಂತಿಯುತವಾಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಇನ್ನು ಹಲವು ಆಸ್ಪತ್ರೆಗಳಲ್ಲಿ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಮಧ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಶ್ ಇಲಾಖೆಯು ಸುತ್ತೋಲೆ ಹೊರಡಿಸಿ ಇವತ್ತು ಯಾವುದೇ ಸರ್ಕಾರಿ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ರಜೆ ಪಡೆಯದಂತೆ ಸೂಚಿಸಿದೆ.
ಭಾರತೀಯ ವೈದ್ಯಕೀಯ ಸಂಘವು ಮುಷ್ಕರಕ್ಕೆ ಕರೆ ಕೊಟ್ಟಿರೋದ್ರಿಂದ ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರಿ ಆಸ್ಪತ್ರೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸುತ್ತೋಲೆಯಲ್ಲಿ ಆದೇಶಿಸಲಾಗಿದೆ.