ಬೆಂಗಳೂರು, ಜೂ 16 (Daijiworld News/SM): ರಾಜ್ಯದ ಮೈತ್ರಿ ಸರಕಾರದ ವಿರುದ್ಧ ಮತ್ತೆ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ. ಮೈತ್ರಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಮೈತ್ರಿ ಸರ್ಕಾರ ಹಾಗೂ ಮಂತ್ರಿಗಳು ಏನು ಸಿಗುತ್ತದೆ ಎಂದು ಕಾಯುತ್ತಿರುತ್ತಾರೆ. ಹಾಗೂ ಅವುಗಳನ್ನು ಮಾರಾಟ ಮಾಡಿ ದುಡ್ಡು ಮಾಡುವ ಪರಿಸ್ಥಿತಿಗೆ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿರುವ ಮೈತ್ರಿ ಸರಕಾರ ಅಭಿವೃದ್ಧಿಯನ್ನು ಮರೆತಂತಿದೆ. ಅಭಿವೃದ್ಧಿಯ ಹೊರತಾಗಿ ಎಲ್ಲಾ ಕೆಲಸವನ್ನು ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಈ ಹಿಂದೆಯೂ ಕೂಡ ಈಶ್ವರಪ್ಪ ಮೈತ್ರಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹಾಗೂ ಸಿಎಂ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು.