ನವದೆಹಲಿ, ಏ.19 (DaijiworldNews/AA): 4 ಅಂತಸ್ತಿನ ಕಟ್ಟಡ ಕುಸಿದು 9 ತಿಂಗಳ ಮಗು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.

ಅವಘಡದಲ್ಲಿ 18 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ 10 ಕ್ಕೂ ಹೆಚ್ಚು ಮಂದಿ ಅವಶೇಷಗಳ ಅಡಿ ಸಿಲುಕಿರುವ ಸಂಶಯವಿದೆ. ಕಟ್ಟಡ ಕುಸಿದ ವೇಳೆ ಸುಮಾರು 24 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು ಅವರಲ್ಲಿ 18 ಮಂದಿಯನ್ನ ರಕ್ಷಿಸಲಾಗಿದೆ. ಈ ಪೈಕಿ ತೀವ್ರವಾಗಿ ಗಾಯಗೊಂಡಿದ್ದ 14 ಮಂದಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ಅವಶೇಷಗಳಡಿಯಲ್ಲಿ ಸಿಲುಕಿರಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈಶಾನ್ಯ ದೆಹಲಿಯ ದಯಾಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ. ಮೃತರನ್ನು ಚಾಂದಿನಿ, ದಾನಿಶ್, ರೇಷ್ಮಾ ಮತ್ತು ನವೀದ್ ಎಂದು ಗುರುತಿಸಲಾಗಿದೆ.
ಸದ್ಯ ಎನ್ಡಿಆರ್ಎಫ್, ಡಾಗ್ ಸ್ಕ್ವಾಡ್, ದೆಹಲಿ ಪೊಲೀಸರ ತಂಡಗಳು ಮತ್ತು ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಈವರೆಗೆ 18 ಮಂದಿಯನ್ನ ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಸ್ಥಳೀಯ ಡಿಸಿಪಿ ತಿಳಿಸಿದ್ದಾರೆ.