ಬೆಂಗಳೂರು, ಏ.19 (DaijiworldNews/AA): ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕ್ರೈಂ ಪ್ರಕರಣಗಳು ಕಡಿಮೆಯಾಗಿವೆ. ಸೈಬರ್ ಕೇಸ್ ಕಡಿಮೆಯಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.

ರಿಕ್ಕಿ ರೈ ಮೇಲೆ ಗುಂಡಿನ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನಗೆ ವಿಷಯ ಗೊತ್ತಾಗಿದೆ. ರಾತ್ರಿ ಸುಮಾರು 1.30-2.00 ಗಂಟೆ ಸಮಯದಲ್ಲಿ ರಿಕ್ಕಿಯ ಮೇಲೆ ಎರಡು ಸುತ್ತು ಗುಂಡಿನ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿ ಕೇಳಿದ್ದೇನೆ. ಔಟ್ ಆಫ್ ಡೇಂಜರ್ ಅಂತ ಹೇಳಿದ್ದಾರೆ. ಬಿಡದಿಯ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಹೆಚ್ಚಿನ ವಿವರಗಳನ್ನು ಕೇಳಿದ್ದೇನೆ ಎಂದು ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂದು ಎಲ್ಲಾ ಪ್ಯಾರಾ ಮೀಟರ್ಸ್ ಹೇಳುತ್ತಿವೆ. ಕ್ರೈಂ ಪ್ರಕರಣಗಳು ಕಡಿಮೆಯಾಗಿವೆ. ಪೊಲೀಸ್ ಕಮಿಷನರ್ ಬ್ರೀಫ್ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಎಲ್ಲಾ ಸರಿಯಾಗಿದೆ ಎಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು.