ಬಾಗಲಕೋಟೆ, ಏ.23 (DaijiworldNews/AK): ಇದೀಗ ಈ ಬಾರಿಯ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಕ್ಕಿಮರಡಿ ಗ್ರಾಮದ ಯುವಕ ಪಾಂಡುರಂಗ ಸದಾಶಿವ ಕಂಬಳಿ ಅವರು ಯುನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಪರೀಕ್ಷೆಯಲ್ಲಿ 529ನೇ ರ್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಅವರ ಸಕ್ಸಸ್ ಕಥದೆ ಇಲ್ಲಿದೆ.

UPSC ನಾಗರಿಕ ಸೇವೆಗಳ ಪರೀಕ್ಷೆಯ 2024ನೇ ಸಾಲಿನ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಈ ಬಾರಿಯ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಕ್ಕಿಮರಡಿ ಗ್ರಾಮದ ಯುವಕ ಪಾಂಡುರಂಗ ಸದಾಶಿವ ಕಂಬಳಿ ಅವರು ಯುನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಪರೀಕ್ಷೆಯಲ್ಲಿ 529ನೇ ರ್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ರೈತನ ಮಗನಾಗಿರುವ ಪಾಂಡುರಂಗ ಅವರ ಈ ಯಶಸ್ಸು ಗ್ರಾಮೀಣ ಕರ್ನಾಟಕದ ಯುವಕರಿಗೆ ಸ್ಫೂರ್ತಿಯಾಗಿದೆ. ಪಾಂಡುರಂಗ ಕಂಬಳಿ ಅವರು ಕಳೆದ ಒಂದು ವರ್ಷದಿಂದ ಐಎಫ್ಎಸ್ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಮಹಾರಾಷ್ಟ್ರ ಕೇಡರ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸತತ ಐದನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅವರು, ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಈ ಸಾಧನೆಯನ್ನು ಮಾಡಿದ್ದಾರೆ.
ಪಾಂಡುರಂಗ ಅವರ ಕುಟುಂಬ ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದು, ಈ ಸಾಧನೆಯಿಂದ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಗ್ರಾಮೀಣ ಹಿನ್ನೆಲೆಯಿಂದ ಬಂದು ದೇಶದ ಅತ್ಯಂತ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಕಂಡಿರುವ ಪಾಂಡುರಂಗ ಅವರ ಕತೆ, ಯುವ ಪೀಳಿಗೆಗೆ ದೊಡ್ಡ ಪ್ರೇರಣೆಯಾಗಿದೆ.