ಬೆಂಗಳೂರು, ಮೇ. 01 (DaijiworldNews/AA): ಕೇಂದ್ರ ಸರ್ಕಾರ, ಜನಗಣತಿ ಹಾಗೂ ಜಾತಿ ಸಮೀಕ್ಷೆ ನಡೆಸುವುದರಿಂದ, 2029ರ ಚುನಾವಣೆ ವೇಳೆಗೆ, ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ತರಲು ಸಹಕಾರಿಯಾಗಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಜಾತಿಗಣತಿಯ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಲು ತೀರ್ಮಾನಿಸಿದೆ. ಜವಹಾರ್ ಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ಜಾತಿ ಸಮೀಕ್ಷೆ ನಡೆಸಲಿಲ್ಲ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ, ಜಾತಿ ಗಣತಿ ಪ್ರಸ್ತಾವವನ್ನು ತಿರಸ್ಕರಿಸಲಾಗಿತ್ತು ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಸರ್ಕಾರ ನಡೆಸಿರುವ ಸಮೀಕ್ಷಾ ವರದಿ ಅಧಿಕೃತವಲ್ಲ. ಸಿದ್ಧರಾಮಯ್ಯ ಮನೆಯಲ್ಲಿಯೇ ಕುಳಿತು ಬರೆಸಿದ ಸಮೀಕ್ಷೆ, ಅದು ಅನೂರ್ಜಿತಗೊಳ್ಳಲಿದೆ. ಕೇಂದ್ರ ಸರ್ಕಾರದ ವರದಿಯನ್ನು ಚುನಾವಣಾ ಆಯೋಗ ಬಳಸಿಕೊಳ್ಳಲಿದೆ ಎಂದರು.