ಬೆಂಗಳೂರು, ಮೇ.02(DaijiworldNews/AK):ಮಂಗಳೂರಿನಲ್ಲಿ ಕೊಲೆ ಆದವನು ರೌಡಿ ಶೀಟರ್ ಎನ್ನಲಾಗುತ್ತಿದೆ. ಸಮಗ್ರ ತನಿಖೆಗೆ ಸೂಚನೆ ಅಪರಾಧಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಯಾಗಿದ್ದು, ಪದೇಪದೇ ಕೋಮು ಗಲಭೆಗಳಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು , ಕೊಲೆ ಗೀಡಾದ ವ್ಯಕ್ತಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಎಡಿಜಿಪಿ (ಕಾನೂನು ಸುವ್ಯವಸ್ಥೆ) ವರೊಂದಿಗೆ ಮಾತನಾಡಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲು ಸೂಚಿಸಿದೆ.
ಮನುಷ್ಯನ ಪ್ರಾಣ ಬಹಳ ಮುಖ್ಯ. ಕೂಡಲೇ ಅಪರಾಧಿಗಳು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.