ಶ್ರೀನಗರ,ಮೇ. 04 (DaijiworldNews/ AK): ಜಮ್ಮು ಮತ್ತು ಕಾಶ್ಮೀರದ ರಾಂಬನ್ನಲ್ಲಿ ಸೇನಾ ವಾಹನ 700 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ.

ಮೃತ ಸೈನಿಕರನ್ನು ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದೆ. ಸೇನಾ ವಾಹನ ಬಿದ್ದ ರಭಸಕ್ಕೆ ಛಿದ್ರಗೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಸೇನಾ ವಾಹನದ ಫೋಟೋ ವೈರಲ್ ಆಗಿದೆ.
ಫೋಟೋದಲ್ಲಿ ವಾಹನದ ಅವಶೇಷಗಳು, ಸೈನಿಕರ ಶವಗಳು, ಸೈನಿಕರ ಬಳಿ ಇದ್ದ ಕಾಗದ ಪತ್ರಗಳು ಹರಡಿಕೊಂಡಿರುವುದನ್ನು ನೋಡಬಹುದಾಗಿದೆ. ಬೆಳಿಗ್ಗೆ 11.30 ರ ಸುಮಾರಿಗೆ ಬ್ಯಾಟರಿ ಚಶ್ಮಾ ಬಳಿ ಅಪಘಾತ ಸಂಭವಿಸಿದೆ. ಟ್ರಕ್ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
ಸೈನಿಕರು, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಮತ್ತು ಸ್ಥಳೀಯ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.