ಕಲಬುರಗಿ, ಮೇ. 04 (DaijiworldNews/AK): ಮತ್ತೆ ರಾಜ್ಯದಲ್ಲಿ ನೀಟ್ ಪರೀಕ್ಷೆಯಲ್ಲಿ ಅಧಿಕಾರಿಗಳು ವಿದ್ಯಾರ್ಥಿ ಧರಿಸಿದ್ದ ಜನಿವಾರ ತೆಗೆಸಿರುವ ಘಟನೆ ಕಲಬುರಗಿಯ ಖಾಸಗಿ ಶಾಲೆಯಲ್ಲಿ ನಡೆದಿದೆ.

ಇಂದು ರಾಜ್ಯದಾದ್ಯಂತ ನೀಟ್ ಪರೀಕ್ಷೆ ನಡೆದಿದ್ದು, ಶ್ರೀಪಾದ್ ಪಾಟೀಲ್ ನೀಟ್ ಪರೀಕ್ಷೆಗೆ ಹಾಜರಾಗಿದ್ದ. ಶ್ರೀಪಾದ್ ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಅಧಿಕಾರಿಗಳು ಜನಿವಾರ ತೆಗೆದು ಬರುವಂತೆ ಸೂಚಿಸಿದ್ದಾರೆ.
ಈ ವೇಳೆ ಶ್ರೀಪಾದ್ ಅಧಿಕಾರಿಗಳ ಸೂಚನೆಯಂತೆ ಜನಿವಾರ ತೆಗೆದು ಪರೀಕ್ಷೆಗೆ ಹಾಜರಾಗಿದ್ದಾನೆ. ಈ ಘಟನೆಯನ್ನು ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಬ್ರಾಹ್ಮಣ ಸಮಾಜದವರು ಪ್ರತಿಭಟನೆ ನಡೆಸಿದ್ದಾರೆ. ಜನಿವಾರ ತೆಗೆಸಿದ ಅಧಿಕಾರಿಯನ್ನ ನಮ್ಮ ವಶಕ್ಕೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪರೀಕ್ಷಾ ಕೇಂದ್ರದ ಎದುರು ಟೈರ್ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹಾಕಿದ್ದು, ಪ್ರತಿಭಟನೆ ಎಬಿವಿಪಿ ಕಾರ್ಯಕರ್ತರು ಸಾಥ್ ನೀಡಿದರು. ಕಳೆದ ಏಪ್ರಿಲ್ ಸಿಇಟಿ ಪರೀಕ್ಷೆಯಲ್ಲೂ ಇಂತಹದೊಂದು ಪ್ರಕರಣ ನಡೆದಿದ್ದು, ಇದು ರಾಜ್ಯದಾದ್ಯಂತ ಬ್ರಾಹ್ಮಣ ಸಮಾಜದ ಆಕ್ರೋಶಕ್ಕೆ ಕಾರಣವಾಗಿತ್ತು.