ಮುಂಬೈ, ಮೇ. 05 (DaijiworldNews/AA): ಖ್ಯಾತ ಹಿನ್ನಲೆ ಗಾಯಕ ಸೋನು ನಿಗಮ್ ಅವರು ಕಡೆಗೂ ಕನ್ನಡಿಗರಲ್ಲಿ ಕ್ಷಮೆ ಯಾಚಿಸಿದ್ದಾರೆ.

ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೋನು ನಿಗಮ್ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿತ್ತು. ಅವರ ಹೇಳಿಕೆಗೆ ರಾಜ್ಯಾದ್ಯಂತ ವಿರೋಧವೂ ವ್ಯಕ್ತವಾಗಿತ್ತು. ಅವರು ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಒತ್ತಾಯಿಸಲಾಗಿತ್ತು. ಇದೀಗ ಸೋನು ನಿಗಮ್ ಅವರು ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸೋನು ನಿಗಮ್, 'ಕ್ಷಮೆ ಇರಲಿ ಕರ್ನಾಟಕ. ನಿಮ್ಮ ಮೇಲೆ ನನಗೆ ಇರುವ ಪ್ರೀತಿ ನನ್ನ ಅಹಂಕಾರಕ್ಕಿಂತಲೂ ದೊಡ್ಡದು. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ' ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಅವರು ವಿವಾದಕ್ಕೆ ತೆರೆ ಎಳೆದಿದ್ದಾರೆ.