ನವದೆಹಲಿ, ಮೇ. 04 (DaijiworldNews/AK):ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾತ್ತಿರುವ ಬಗ್ಗೆ ಇಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕಳವಳ ವ್ಯಕ್ತಪಡಿಸಿದರು.

ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಭಾರತ ಮತ್ತು ಪಾಕಿಸ್ತಾನ ಸಂಯಮವನ್ನು ವಹಿಸಬೇಕು ಮತ್ತು ಮಿಲಿಟರಿ ಸಂಘರ್ಷವನ್ನು ತಪ್ಪಿಸಬೇಕು ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಒತ್ತಾಯಿಸಿದ್ದಾರೆ.
ಉಗ್ರರ ದಾಳಿಯನ್ನು ಖಂಡಿಸಿದ ಅವರು, ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವುದು ಸ್ವೀಕಾರಾರ್ಹವಲ್ಲ ಅದಕ್ಕೆ ಹೊಣೆಯಾದವರಿಗೆ ಕಾನೂನುಬದ್ಧ ವಿಧಾನಗಳ ಮೂಲಕ ಶಿಕ್ಷೆ ನೀಡಬೇಕು ಎಂದು ಹೇಳಿದ್ದಾರೆ.
''ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸುವುದು, ರಾಜತಾಂತ್ರಿಕತೆ ಮತ್ತು ಶಾಂತಿಯನ್ನು ಉತ್ತೇಜಿಸುವ ಯಾವುದೇ ಕ್ರಮವನ್ನು ಬೆಂಬಲಿಸಲು ವಿಶ್ವಸಂಸ್ಥೆ ಸಿದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.