ನವದೆಹಲಿ, ಮೇ. 07 (DaijiworldNews/AA): ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಉಗ್ರರ ದಾಳಿಗೆ ಪ್ರತೀಕಾರವಾಗಿ ಕೊನೆಗೂ ಭಾರತೀಯ ಸೇನೆ, ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ಮೇ 7 ರ ನಸುಕಿನ ಜಾವದಲ್ಲಿ ದಾಳಿ ನಡೆಸಿದೆ.

ಪಾಕ್ ಆಕ್ರಮಿತ ಕಾಶ್ಮೀರದ ಒಟ್ಟು ಒಂಬತ್ತು ಸ್ಥಳಗಳಾದ ಬಹವಾಲ್ಪುರ್, ಮುರಿಡೈ ಗುಲ್ಬುರ್, ಭಿಂಬರ್, ಚಕ್ ಅಮ್ರು, ಬಾಗ್, ಕೋಟ್ಲಿ, ಸಿಯಾಲ್ನೋಟ್ ಮತ್ತು ಮುಜಫರಾಬಾದ್ ಮೇಲೆ ಭಾರತೀಯ ಸೇನೆ ಕ್ಷಿಪಣಿಗಳ ದಾಳಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇನ್ನು ಈ ದಾಳಿಯಲ್ಲಿ ಪಾಕ್ನ 100ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಮತ್ತು ಅನೇಕ ಭಯೋತ್ಪಾದಕರು ಗಾಯಗೊಂಡಿದ್ದಾರೆ. ಜೊತೆಗೆ ಲಷ್ಕರ್ ಉಗ್ರರಿಗೆ ತರಬೇತಿ ನೀಡಿದ್ದ ಸುಬಾನಲ್ಲಾಹ್ ಮಸೀದಿ ಸೇರಿದಂತೆ ಪ್ರಮುಖ ತಾಣಗಳು ಧ್ವಂಸವಾಗಿದೆ ಎಂದು ವರದಿಯಾಗಿದೆ.
ಭಾರತವು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದ ನಂತರ ಪಾಕಿಸ್ತಾನದ ಮಸೀದಿಗಳಿಂದ ಜನರು ತಮ್ಮ ಮನೆಗಳನ್ನು ತೊರೆಯಬೇಕು. ಈ ಸಮಯದಲ್ಲಿ ಮನೆಗಳಲ್ಲಿ ಯಾರೂ ಇರಬಾರದು. ಜನರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳನ್ನು ತಲುಪುವಂತೆ ಘೋಷಣೆಗಳು ಕೇಳಿಬಂದಿವೆ. ದಾಳಿ ಬೆನ್ನಲ್ಲೇ ಪಾಕಿಸ್ತಾನದಾದ್ಯಂತ ಭಯದ ವಾತಾವರಣ ನಿರ್ಮಾಣವಾಗಿದೆ.