ನವದೆಹಲಿ, ಮೇ. 08 (DaijiworldNews/TA): ಪಾಕ್ ಉಗ್ರರ ವಿರುದ್ಧ ಭಾರತ ನಡೆಸಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ. ಪಿಕ್ಚರ್ ಅಭಿ ಬಾಕಿ ಹೇ ಎನ್ನುವ ಮೂಲಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ , ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ತಾಣಗಳ ಮೇಲೆ ನಡೆಸಿದ ದಾಳಿಗಳ ಬಗ್ಗೆ ರಾಜಕೀಯ ಪಕ್ಷಗಳಿಗೆ ವಿವರಿಸಿದರು. ಈ ವೇಳೆ ಈ ಎಚ್ಚರಿಕೆ ನೀಡಿದ್ದಾರೆ.
ಆಪರೇಷನ್ ಸಿಂಧೂರ್ "ಇನ್ನೂ ಮುಂದುವರೆದಿದೆ" ಎಂದು ಅವರು ಹೇಳಿದರು. ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಸೇರಿದಂತೆ ಹಲವಾರು ಪಕ್ಷಗಳ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು. ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್, ಬಿಜೆಪಿ ಅಧ್ಯಕ್ಷ ಮತ್ತು ಆರೋಗ್ಯ ಸಚಿವ ಜೆ ಪಿ ನಡ್ಡಾ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.