ನವದೆಹಲಿ, ಮೇ. 11 (DaijiworldNews/AA): 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಭಾನುವಾರ ತಿಳಿಸಿದೆ.

'ಪಹಲ್ಲಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ 9 ಸ್ಥಳಗಳನ್ನು ಗುರಿಯಾಗಿಸಿಕೊಂಡು ಮೇ 7 ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ' ಎಂದು ಐಎಎಫ್ ಮಾಹಿತಿ ನೀಡಿದೆ.
'ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ, ವಿವರವಾದ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ಹಂಚಿಕೊಳ್ಳಲಾಗುವುದು. ಊಹಾಪೋಹಗಳಿಗೆ ಕಿವಿಗೊಡಬೇಡಿ ಮತ್ತು ಅಸ್ಪಷ್ಟ ಮಾಹಿತಿಯನ್ನು ಪ್ರಸಾರ ಮಾಡುವುದನ್ನು ತಪ್ಪಿಸಿ' ಎಂದು ಐಎಎಫ್ ಹೇಳಿದೆ.