ನವದೆಹಲಿ,ಮೇ. 16(DaijiworldNews/AK): ಸಿಂಧೂ ನದಿ ಒಪ್ಪಂದವನ್ನು ಪುನರ್ ಪರಿಶೀಲಿಸುವಂತೆ ಪಾಕಿಸ್ತಾನ ಬೇಡಿಕೊಂಡಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ,ಭಯೋತ್ಪಾದಕ ಮೂಲಸೌಕರ್ಯಗಳನ್ನು ನಾಶಮಾಡುವುದು ಮತ್ತು ಪಿಒಕೆಯನ್ನು ತೆರವುಗೊಳಿಸುವ ಬಗ್ಗೆ ಮಾತ್ರ ಉಭಯ ರಾಷ್ಟ್ರಗಳ ನಡುವೆ ಮಾತುಕತೆ ನಡೆಯಬಹುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆ ಸಮಸ್ಯೆ ಬಗೆಹರಿಯುವವರೆಗೆ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಲಾಗುವುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಹಸ್ತಾಂತರಿಸಬೇಕಾದ ಭಯೋತ್ಪಾದಕರ ಪಟ್ಟಿಯನ್ನು ಪಾಕಿಸ್ತಾನ ಬಳಿಯಿದೆ. ಉಗ್ರ ನೆಲೆಗಳನ್ನು ಧ್ವಂಸಗೊಳಿಸುವ ಗುರಿಯಲ್ಲಿ ನಾವು ಯಶಸ್ಸು ಸಾಧಿಸಿದ್ದೇವೆ. ಉಗ್ರ ನೆಲೆಗಳ ಮೇಲೆ ನಾವು ದಾಳಿ ಮಾಡುತ್ತಿದ್ದೇವೆ ಎಂಬ ಸಂದೇಶವನ್ನು ಕಳುಹಿಸಿದ್ದೆವು. ನಾವು ಸೇನೆಯನ್ನು ಗುರಿಯಾಗಿಸಿ ದಾಳಿ ಮಾಡಿರಲಿಲ್ಲ. ಅವರು ಈ ಉತ್ತಮ ಸಲಹೆಯನ್ನು ಸ್ವೀಕರಿಸಲಿಲ್ಲ. ಒಮ್ಮೆ ಕೆಟ್ಟ ಹೊಡೆತ ಬಿದ್ದಮೇಲೆ ಕದನ ವಿರಾಮಕ್ಕೆ ಗೋಗರೆಯಿತು ಎಂದು ಹೇಳಿದರು.
ನಾವು ಎಷ್ಟು ಹಾನಿ ಮಾಡಿದ್ದೇವೆ ಎಂಬುದನ್ನು ಉಪಗ್ರಹ ಚಿತ್ರಗಳು ಹೇಳುತ್ತಿವೆ. ನಮ್ಮ ಮತ್ತು ಪಾಕಿಸ್ತಾನ ಮಧ್ಯೆ ಮಾತುಕತೆ ದ್ವಿಪಕ್ಷೀಯಯವಾಗಿರುತ್ತದೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.