ಹೊಸಪೇಟೆ, ಮೇ. 16 (DaijiworldNews/AA): ಗ್ಯಾರಂಟಿ ಯೋಜನೆಗಳ ಜಾರಿಗೆ ಹಣಕಾಸಿನ ಸಮಸ್ಯೆ ಇಲ್ಲ. ಕಳೆದ ವರ್ಷದಂತೆ ಗ್ಯಾರಂಟಿ ಯೋಜನೆಗಳಿಗಾಗಿ ಈ ವರ್ಷವೂ ಬಜೆಟ್ನಲ್ಲಿ ಹಣ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೊಸಪೇಟೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ 2 ವರ್ಷ ಪೂರೈಸಿದ ಸಂದರ್ಭದಲ್ಲಿ ಸಾಧನಾ ಸಮಾವೇಶವನ್ನು ಇದೇ 20 ರಂದು ಹೊಸಪೇಟೆಯಲ್ಲಿ ಆಯೋಜಿಸಲಾಗುತ್ತಿದೆ. ಸಮಾವೇಶದಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದರು.
ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಮಹಾನಗರ ಪಾಲಿಕೆಯನ್ನು ಮೂರು ಅಥವಾ ಅದಕ್ಕಿಂತ ಹೆಚ್ಚು ಪಾಲಿಕೆಗಳನ್ನಾಗಿ ವಿಭಜನೆ ಮಾಡಬೇಕು ಎಂದು ಬಿ ಎಸ್ ಪಾಟೀಲ್, ಸಿದ್ದರಾಮಯ್ಯ ಅವರನ್ನು ಒಳಗೊಂಡ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಅದರ ಅನ್ವಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.