ಬೆಂಗಳೂರು, ಜೂ. 27(DaijiworldNews/AK) : ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇದೇ ವೇಳೆ ಪಕ್ಷದಲ್ಲಿ ಆಂತರಿಕ ಜಗಳ ಇಲ್ಲ ಎಂದು ತಿಳಿಸಿದರು.

ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು , ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಹೇಳಿಕೆ ನಿರ್ಲಕ್ಷಿಸಿ
ಸಚಿವ ರಾಜಣ್ಣ ಅವರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದು ತಿಳಿಸಿದರು.