ಬೆಂಗಳೂರು, ಜು. 01 (DaijiworldNews/AA): ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಎಸ್ಐಟಿಗೆ ಸೂಚನೆ ನೀಡಿದೆ.

ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಇನ್ನು, ಸಿಬಿಐನಿಂದ ಪ್ರಕರಣದ ತನಿಖೆ ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ರಿಟ್ ಅರ್ಜಿ ಸಲ್ಲಿಸಿದ್ದರು.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಹಣ ದುರುಪಯೋಗದ ಆರೋಪಗಳಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬ್ಯಾಂಕ್ ಮನವಿ ಮಾಡಿತ್ತು. ಆದರೆ, ಹೈಕೋರ್ಟ್ ಈ ಮನವಿಯನ್ನು ತಿರಸ್ಕರಿಸಿತ್ತು.