ಬೆಂಗಳೂರು, ಆ. 12 (DaijiworldNews/AK): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು.

ಸಿಸಿಹೆಚ್ 63ರ ನ್ಯಾಯಾಧೀಶರ ಮುಂದೆ ಆರೋಪಿಗಳು ಹಾಜರಾದರು. ಚಾರ್ಜ್ ಫ್ರೇಮ್ಗೆ ನ್ಯಾಯಾಧೀಶರು ಸಮಯ ನಿಗದಿಪಡಿಸಿದರು. ಪ್ರಕರಣದ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.
ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್, ಪುಟ್ಟಸ್ವಾಮಿ, ರಾಘವೇಂದ್ರ, ನಂದೀಶ್, ರವಿಶಂಕರ್, ನಾಗರಾಜು, ಲಕ್ಷ್ಮಣ್, ದೀಪಕ್ ಕುಮಾರ್ ನ್ಯಾಯಾಲಯದ ಮುಂದೆ ಹಾಜರಿದ್ದರು. ವಿನಯ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಗೈರಾಗಿದ್ದರು.