ಬೆಂಗಳೂರು, ಆ. 16 (DaijiworldNews/ AK): ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೊಂದು ಖಾಲಿ ಡಬ್ಬ ಏನು ಇಲ್ಲ. ಅಲ್ಲಿ ಕೇವಲ ಸದ್ದು ಜಾಸ್ತಿ ಆಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಹೇಳಿಕೆ ನೀಡಿದ ಅವರು, ಈ ಪ್ರಕರಣದಲ್ಲಿ ಬಹಳ ದೊಡ್ಡ ಷಡ್ಯಂತ್ರ ನಡೆದಿದೆ. ಯಾರದ್ದು ಷಡ್ಯಂತ್ರ ಎಂದು ಈಗ ನಾನು ಹೇಳಲ್ಲ. ಬಹಳ ಪ್ಲ್ಯಾನ್ ಮಾಡಿ ಅವರ ಮೇಲೆ ಕಪ್ಪು ಚುಕ್ಕೆ ತರಲು ನೋಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಯಾರನ್ನೋ ತೇಜೋವಧೆ ಮಾಡಿ ನೂರಾರು ವರ್ಷದಿಂದ ಬಂದ ಪರಂಪರೆಯನ್ನು ಹಾಳು ಮಾಡಲು ಹೊರಟಿದ್ದಾರೆ. ಅವನ್ಯಾರೋ ಒಬ್ಬ ನ್ಯಾಯಾಲಯಕ್ಕೆ ಹೋಗಿ ಹೇಳಿಕೆ ಕೊಟ್ಟಿದ್ದಾನೆ. ಹೇಳಿಕೆ ನೀಡಿದ್ದರಿಂದ ತನಿಖೆ ನಡೆಯುತ್ತಿದೆ ಎಂದು ಹೇಳಿದರು.