ಬೆಂಗಳೂರು, ಆ. 14 (DaijiworldNews/AK): ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.


ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್ಮೆಂಟ್ನಲ್ಲಿ ಇದ್ದ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಪೊಲೀಸರು ಅಪಾರ್ಟ್ಮೆಂಟ್ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದಾರೆ. ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಈ ಮೊದಲೇ ಪೊಲೀಸರು ಅರೆಸ್ಟ್ ಮಾಡಿದ್ದರು. ಇಷ್ಟು ದಿನಗಳ ಕಾಲ ಸಿನಿಮಾ ಕೆಲಸ ಹಾಗೂ ಫ್ಯಾಮಿಲಿ ಜೊತೆಯಲ್ಲಿ ಬ್ಯುಸಿ ಆಗಿದ್ದ ದರ್ಶನ್ ಅವರಿಗೆ ಇನ್ಮುಂದೆ ಜೈಲೇ ಗತಿಯಾಗಿದೆ.
ಇಂದು ಮುಂಜಾನೆ, ಪೊಲೀಸರು ದರ್ಶನ್ ಅವರ ಆಪ್ತ ಸಹಾಯಕ ಮತ್ತು ಸಹ ಆರೋಪಿ ಪವಿತ್ರಾ ಗೌಡ ಸೇರಿದಂತೆ ಪ್ರಕರಣದ ಇತರ ಆರು ಆರೋಪಿಗಳನ್ನು ಬಂಧಿಸಿದರು.