ನವದೆಹಲಿ, , ಆ. 20 (DaijiworldNews/ AK): ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಇಂದು 3 ಮಸೂದೆಗಳನ್ನು ಮಂಡಿಸಿದ್ದಾರೆ.

ಗಂಭೀರ ಕ್ರಿಮಿನಲ್ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಧಾನಿ, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಸೇರಿದಂತೆ ಚುನಾಯಿತ ಪ್ರತಿನಿಧಿಗಳನ್ನು ಸತತ 30 ದಿನಗಳವರೆಗೆ ಬಂಧನದಲ್ಲಿದ್ದರೆ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕುವ ಪ್ರಸ್ತಾಪವನ್ನು ಹೊಂದಿರುವ ಮಸೂದೆ ಸೇರಿದಂತೆ ಮೂರು ಮಸೂದೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದರು.
ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ-2025, ಪ್ರಧಾನಿ, ಮುಖ್ಯಮಂತ್ರಿ, ಸಚಿವರನ್ನು ಪದಚ್ಯುತಗೊಳಿಸುವ ಮಸೂದೆ, ಜಮ್ಮು ಮತ್ತು ಕಾಶ್ಮೀರ ಪುನರ್ವಿಂಗಡಣೆ (ತಿದ್ದುಪಡಿ) ಮಸೂದೆ- 2025. ಕ್ರಿಮಿನಲ್ ಕೇಸ್ನಲ್ಲಿ ಪ್ರಧಾನಿಗಳು, ಕೇಂದ್ರ ಸಚಿವರು, ಸಿಎಂಗಳು, ರಾಜ್ಯಗಳ ಸಚಿವರು ಬಂಧನಕ್ಕೆ ಒಳಗಾದರೆ ಅವರನ್ನು ಆ ಹುದ್ದೆಯಿಂದ ವಜಾ ಮಾಡುವ ಮಸೂದೆಯನ್ನು ಲೋಕಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಮಂಡಿಸಿದ್ದಾರೆ.
ಹೊಸ ಮಸೂದೆಯಿಂದ ಪಿಎಂ, ಸಿಎಂ, ಸಚಿವರ ವಜಾಕ್ಕೆ ಅವಕಾಶವಿರಲಿದೆ. ಅವರು 2 ವರ್ಷಕ್ಕಿಂತ ಹೆಚ್ಚು ಶಿಕ್ಷೆಗೆ ಒಳಗಾದರೆ ಹುದ್ದೆಯಿಂದ ವಜಾಗೊಳಿಸಲಾಗುವುದು. ಯಾವುದೇ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ರಾಜ್ಯಗಳ ಸಚಿವರನ್ನು ವಶಕ್ಕೆ ಪಡೆದರೆ ಅಥವಾ ಬಂಧನಕ್ಕೆ ಒಳಗಾದರೆ ಅವರನ್ನು 30 ದಿನದೊಳಗೆ ಹುದ್ದೆಯಿಂದ ವಜಾಗೊಳಿಸಲು ಅವಕಾಶವಿದೆ. ಅಥವಾ ಅವರು 30 ದಿನದೊಳಗೆ ರಾಜೀನಾಮೆ ನೀಡುವುದು ಕಡ್ಡಾಯವಾಗಲಿದೆ.