ಬೆಂಗಳೂರು, ಆ. 20 (DaijiworldNews/AA): ಸಿದ್ದರಾಮಯ್ಯ ನಮಗೆ ಸಿಎಂ ಅಲ್ಲ, ಡಿಕೆಶಿ ಇಲ್ಲೇ ಇದ್ದಾರೆ. ಅವರೇ ಸಾಕು, ಡಿಕೆಶಿಯವರೇ ನಮಗೆ ಸಿಎಂ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದರು.

ವಿಧಾನಸಭೆಯಲ್ಲಿ ಮಧ್ಯಾಹ್ನದ ಬಳಿಕ ಸಿಎಂ ಸಿದ್ದರಾಮಯ್ಯನವರು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಅವರು, 'ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ಒಳಮೀಸಲಾತಿ ಒದಗಿಸಲಾಗಿದೆ. ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗ ರಚಿಸಲು ಸರ್ಕಾರ ತೀರ್ಮಾನಿಸಿದೆ. ಒಳ ಮೀಸಲಾತಿ ಹೋರಾಟಗಾರರ ವಿರುದ್ಧ ದಾಖಲಿಸಿದ ಮೊಕದ್ದಮೆಗಳನ್ನು ವಾಪಸ್ ಪಡೆಯಲು ಸರ್ಕಾರ ತೀರ್ಮಾನಿಸಿದೆ. ಒಳಮೀಸಲಾತಿ ಕುರಿತ ದಶಕಗಳ ಬೇಡಿಕೆಗೆ ನಮ್ಮ ಸರ್ಕಾರ ನ್ಯಾಯ ಒದಗಿಸಿಕೊಟ್ಟಿದ್ದು ಸಾಮಾಜಿಕ ನ್ಯಾಯ ಕಲ್ಪಿಸುವಲ್ಲಿ ನಮ್ಮ ಸರ್ಕಾರ ಬದ್ಧತೆ ತೋರಿದೆ' ಎಂದರು.
'ಒಳಮೀಸಲಾತಿ ಜಾರಿ ಬಗ್ಗೆ ಸಿಎಂ ಹೇಳಿಕೆಗೆ ವಿಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಸಿಎಂ ಹೇಳಿಕೆಯ ಮೇಲೆ ಚರ್ಚೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದರು. ಇದು ರಾಜಕೀಯ ಹೇಳಿಕೆ, ನಮಗೂ ಇದರ ಮೇಲೆ ಚರ್ಚೆಗೆ ಅವಕಾಶ ಕೊಡಿ' ಎಂದು ಹೇಳಿದರು.