ಬೆಂಗಳೂರು, ಆ. 22 (DaijiworldNews/AK): ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ಮಳಿಗೆಯನ್ನು ಲೋಕಾರ್ಪಣೆ ಮಾಡಿದರು.

ಪ್ರಾರಂಭಿಕವಾಗಿ ಮೂರು ಮೆಟ್ರೋ ಸ್ಟೇಷನ್ಗಳಲ್ಲಿ ನಂದಿನಿ ಮಳಿಗೆಗಳು ನಿರ್ಮಾಣ ಆಗಿದ್ದು, ಬಳಿಕ 10 ಮೆಟ್ರೋ ನಿಲ್ದಾಣದಲ್ಲಿ ನಿರ್ಮಾಣ ಆಗಲಿದೆ. ಅದರಂತೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ನಂದಿನಿ ಮಳಿಗೆ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಸೆಂಟ್ರಲ್ ಕಾಲೇಜ್ ಮೆಟ್ರೋ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ಆರಂಭವಾಗಲಿದೆ.
ನಂದಿನಿ ಮಳಿಗೆ ಉದ್ಘಾಟನೆ ವೇಳೆ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರು ಡೈರಿ ಅಧ್ಯಕ್ಷ ಡಿ.ಕೆ.ಸುರೇಶ್, ಕೆಎಂಎಫ್ ಎಂಡಿ ಶಿವಸ್ವಾಮಿ ಉಪಸ್ಥಿತರಿದ್ದರು.