ತಿರುವನಂತಪುರಂ, ಅ. 22 (DaijiworldNews/ AK): ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಗೆ ಭೇಟಿ ನೀಡಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಮೂಲಕ ಶಬರಿಮಲೆಗೆ ಭೇಟಿ ನೀಡಿದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
ಸೋಮವಾರದಿಂದ ಸಂಜೆ 6:20ರ ಸುಮಾರಿಗೆ ತಿರುವನಂತಪುರಂಕ್ಕೆ ಆಗಮಿಸಿದ ಮುರ್ಮು ಅವರಿಂದು ಹೆಲಿಕಾಪ್ಟರ್ ಮೂಲಕ ಕೇರಳದ ಪ್ರಮಾಡಂ ಇನ್ಡೋರ್ ಸ್ಟೇಡಿಯಂಗೆ ಬಂದಿಳಿದರು . ನಂತರ ಅಲ್ಲಿಂದ ಶಬರಿಮಲೆಗೆ ತೆರಳಿ ತುಲಾ ಮಾಸ ಪೂಜೆಯ ಕೊನೆಯ ದಿನದಂದು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.