ನವದೆಹಲಿ, ನ. 16 (DaijiworldNews/AK): ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ ದೆಹಲಿಯಲ್ಲಿ ಬಂಧಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ನ ಸಂಬೂರಾದ ನಿವಾಸಿ ಅಮೀರ್ ರಶೀದ್ ಬಂಧಿತ ಆರೋಪಿ. ಭಯೋತ್ಪಾದಕ ದಾಳಿಯನ್ನು ನಡೆಸಲು ಆರೋಪಿ ಆತ್ಮಹತ್ಯಾ ಬಾಂಬರ್ ಉಮರ್ ನಬಿ ಜೊತೆ ಜೊತೆ ಸೇರಿ ಸಂಚು ರೂಪಿಸಿದ್ದಾನೆ ಎಂದು ಎನ್ಐಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಸ್ಫೋಟಕ್ಕೆ ಬಳಕೆಯಾಗಿದ್ದ ಐ20 ಕಾರು ಅಮೀರ್ ರಶೀದ್ ಹೆಸರಿನಲ್ಲಿ ನೋಂದಣಿಯಾಗಿತ್ತು. ಈ ಕಾರನ್ನು ಅಮೀರ್ ಉಮರ್ ನಬಿಗೆ ನೀಡಿದ್ದ. ಅಂತಿಮವಾಗಿ ಈ ಕಾರಿನಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು ಇಡಲಾಗಿತ್ತು.
ಐ20 ಕಾರನ್ನು ಚಲಾಯಿಸಿದ ಚಾಲಕ ಪುಲ್ವಾಮಾ ಜಿಲ್ಲೆಯ ನಿವಾಸಿ ಮತ್ತು ಫರಿದಾಬಾದ್ನ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಜನರಲ್ ಮೆಡಿಸಿನ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕ ಉಮರ್ ಉನ್ ನಬಿ ಎನ್ನವುದು ವಿಧಿವಿಜ್ಞಾನದ ಪ್ರಯೋಗಾಲಯದ ಮೂಲಕ ದೃಢಪಟ್ಟಿದೆ.