ದಾವಣಗೆರೆ, ಡಿ. 14 (DaijiworldNews/AA): ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಅವರಿಗೆ ಕಳೆದೊಂದು ತಿಂಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರು ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.
ಇನ್ನು ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆ ಭೇಟಿ ನೀಡಿ ಶಿವಶಂಕರಪ್ಪ ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದ್ದರು. ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸುಧಾರಣೆಯಾಗಲಿ ಎಂದು ದಾವಣಗೆರೆಯಲ್ಲಿ ಅಭಿಮಾನಿಳಿಂದ ಪ್ರಾರ್ಥನೆ ನೆರವೇರಿತ್ತು.